ದೇವರ ಸಂಪೂರ್ಣ ರಕ್ಷಾಕವಚ - ನಮ್ಮ ಆಧ್ಯಾತ್ಮಿಕ ಜೀವನದಲ್ಲಿ ನಾವು ತೆಗೆದುಕೊಳ್ಳಬೇಕಾದ ರಕ್ಷಣೆಯನ್ನು ಪ್ರತಿನಿಧಿಸುತ್ತದೆ. KANNADA-ಕನ್ನಡ: J.V. Bible Ephesians (ಎಫೆಸ) 6:10-18 10 ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ. 11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12 ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. 13 ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ. 14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು 15 ಸಮಾಧ...