Armor of God - ದೇವರ ಸಂಪೂರ್ಣ ರಕ್ಷಾಕವಚ ( Kannada )

                                                





ದೇವರ ಸಂಪೂರ್ಣ ರಕ್ಷಾಕವಚ- ನಮ್ಮ ಆಧ್ಯಾತ್ಮಿಕ ಜೀವನದಲ್ಲಿ ನಾವು ತೆಗೆದುಕೊಳ್ಳಬೇಕಾದ ರಕ್ಷಣೆಯನ್ನು ಪ್ರತಿನಿಧಿಸುತ್ತದೆ.

KANNADA-ಕನ್ನಡ: J.V. Bible

Ephesians (ಎಫೆಸ) 6:10-18

10 ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.

11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

12 ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.

13 ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.

14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು

15 ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

16 ಮತ್ತು ನಂಬಿಕೆಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.

17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.

18 ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.




Comments